Home ಕರಾವಳಿ ತಲಪಾಡಿ : ಆರ್ ಟಿ ಓ ಕಚೇರಿಗೆ ಲೋಕಾಯುಕ್ತ ದಾಳಿ

ತಲಪಾಡಿ : ಆರ್ ಟಿ ಓ ಕಚೇರಿಗೆ ಲೋಕಾಯುಕ್ತ ದಾಳಿ

ಮಂಗಳೂರು: ತಲಪಾಡಿ ಆರ್ ಟಿ ಓ ಕಚೇರಿಗೆ ಲೋಕಾಯುಕ್ತ ಎಸ್.ಪಿ ಲಕ್ಷ್ಮೀಗಣೇಶ್ ನೇತೃತ್ವದ ತಂಡ ದಾಳಿ ನಡೆಸಿದೆ.

ಕೇರಳ – ಕರ್ನಾಟಕ ಗಡಿಭಾಗದ  ತಲಪಾಡಿಯಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ, ತಲಪಾಡಿ ತನಿಖಾ ಠಾಣೆಗೆ ಸಂಜೆ 7 ಗಂಟೆಗೆ ಲೋಕಾಯುಕ್ತ ತಂಡ ದಾಳಿ ನಡೆಸಿ ಸತತ ಮೂರು ಗಂಟೆಗಳವರೆಗೆ  ದಾಖಲೆಗಳ ಪರಿಶೀಲನೆ ನಡೆಸಿದರು.

ಲಾರಿ ಚಾಲಕರಿಂದ ಲಂಚ ಪಡೆಯುವ ಆರೋಪಗಳು ಈ ಹಿಂದೆ ಹಲವು ಬಾರಿ ವ್ಯಕ್ತವಾಗಿತ್ತು. ಈ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿರುವುದಾಗಿ ತಿಳಿದುಬಂದಿದೆ.

Join Whatsapp
Exit mobile version