Home ಟಾಪ್ ಸುದ್ದಿಗಳು ಅಧಿಕಾರಿಗಳಿಗೆ ಶಾಕ್: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಅಧಿಕಾರಿಗಳಿಗೆ ಶಾಕ್: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ದಾವಣಗೆರೆ: ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ದಾವಣಗೆರೆಯ ಶಕ್ತಿನಗರದ 3ನೇ ಕ್ರಾಸ್‌ನಲ್ಲಿರುವ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಸಹಾಯಕ ನಿರ್ದೇಶಕ ಕಮಲ್ ರಾಜ್ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.

ಎಸ್‌ಪಿ ಎಂ.ಎಸ್.ಕೌಲಾಪುರೇ ನೇತೃತ್ವದಲ್ಲಿ ದಾಳಿ ನಡೆದಿದೆ. ಸಿಪಿಐ ಮಧುಸೂಧನ್, ಪ್ರಭು ಸೇರಿದಂತೆ ಹತ್ತಕ್ಕೂ ಹೆಚ್ಚು ಸಿಬ್ಬಂದಿಯಿಂದ ಶೋಧ ಕಾರ್ಯ ನಡೆದಿದೆ. ಮನೆಯ ಪ್ರತಿಯೊಂದು ಕೋಣೆಯನ್ನು ಪರಿಶೀಲನೆ ಮಾಡಿದ್ದಾರೆ.

ಧಾರವಾಡದಲ್ಲಿ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ನಿವಾಸದ ಮೇಲೆ ದಾಳಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಧಾರವಾಡ ನಗರದ ಗಾಂಧಿನಗರ ಬಡಾವಣೆಯಲ್ಲಿನ ಮನೆ ಮೇಲೆ ಲೋಕಾಯುಕ್ತ ಡಿವೈಎಸ್ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆದಿದೆ. ಆಸ್ತಿ ದಾಖಲೆಗಳ ಪರಿಶೀಲನೆ ಮಾಡಲಾಗಿದೆ.

Join Whatsapp
Exit mobile version