ಡಿಕೆಶಿ ವಿರುದ್ಧ FIR​ ದಾಖಲಿಸಿದ ಲೋಕಾಯುಕ್ತ

Prasthutha|

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಮೇಲೆ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

- Advertisement -


ಅಕ್ರಮ ಆಸ್ತಿಗಳಿಕೆ ಪ್ರಕರಣದ ತನಿಖೆಯ ಪೂರ್ವಾನುಮತಿಯನ್ನು ಹಿಂಪಡೆದ ಬಳಿಕ ಸರ್ಕಾರ ತನಿಖೆಯ ಜವಾಬ್ದಾರಿಯನ್ನು ಲೋಕಾಯುಕ್ತಕ್ಕೆ ನೀಡಿತ್ತು. ಈಗ ಲೋಕಾಯುಕ್ತ ಪೊಲೀಸರು ಡಿಕೆಶಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.


- Advertisement -

ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಲೋಕಾಯುಕ್ತ ಪತ್ರ ಬರೆದಿದ್ದು, ಸಿಬಿಐ ಈವರೆಗೂ ಲೋಕಾಯುಕ್ತಕ್ಕೆ ಸಂಬಂಧಿಸಿದ ದಾಖಲೆ ಒದಗಿಸಿಲ್ಲ ಎಂದು ತಿಳಿದು ಬಂದಿದೆ.


ಒಂದು ಕಡೆ ಸಿಬಿಐ ನಿಂದ ಡಿ ಕೆ ಶಿವಕುಮಾರ್ ಅವರಿಗೆ ನೋಟಿಸ್ ನೀಡಲಾಗಿದ್ದು, ಮತ್ತೊಂದು ಕಡೆ ಲೋಕಾಯುಕ್ತ ಎಫ್ ಐ ಆರ್ ದಾಖಲು ಮಾಡಿದೆ.



Join Whatsapp