Home ಟಾಪ್ ಸುದ್ದಿಗಳು ಲೋಕಾಯುಕ್ತ ದಾಳಿ| ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ₹6 ಕೋಟಿ ನಗದು ವಶ

ಲೋಕಾಯುಕ್ತ ದಾಳಿ| ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ₹6 ಕೋಟಿ ನಗದು ವಶ

ಬೆಂಗಳೂರು: ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಬರೋಬ್ಬರಿ 6 ಕೋಟಿ ರೂ. ನಗದನ್ನು ಲೋಕಾಯುಕ್ತ ಪೊಲೀಸರು ಗುರುವಾರ ತಡರಾತ್ರಿ ವಶಪಡಿಸಿಕೊಂಡಿದ್ದಾರೆ.

ಪ್ರಶಾಂತ್ ಅವರನ್ನು 40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಗುರುವಾರ ಸಂಜೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಅವರ ಖಾಸಗಿ ಕಚೇರಿಯಲ್ಲಿ ಇನ್ನೂ 1.62 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು.

ವೀಡಿಯೋ ವೀಕ್ಷಿಸಿ…

https://prasthutha.com/wp-content/uploads/2023/03/AFO3TYWuVS6Xg2ui.mp4

ಬಳಿಕ ಡಾಲರ್ಸ್ ಕಾಲೋನಿಯ ಪ್ರಶಾಂತ್ ಮನೆಯ ಮೇಲೆ ದಾಳಿ ಮಾಡಿ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದಾರೆ.


ಮನೆಯಲ್ಲಿ ಸಂಗ್ರಹಿಸಿ ಇರಿಸಿದ್ದ 6 ಕೋಟಿ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version