ರೇವಣ್ಣ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ

Prasthutha|

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಜೊತೆಗೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ವಿರುದ್ಧ ವಿಶೇಷ ತನಿಖಾ ತಂಡ (ಎಸ್ ಐಟಿ) ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಶನಿವಾರ ಹೇಳಿದ್ದಾರೆ.

- Advertisement -


ಎರಡನೇ ಬಾರಿ ಸಮನ್ಸ್ ಪಡೆದಿರುವ ಮಾಜಿ ಸಚಿವ ರೇವಣ್ಣ, ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ಇಂದು ಸಂಜೆಯವರೆಗೂ ಸಮಯಾವಕಾಶವಿದೆ. ಅವರ ವಿರುದ್ಧ ಈಗಾಗಲೇ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಅವರು ಹೇಳಿದರು.

Join Whatsapp