ಕಾಸರಗೋಡು: ಕೇರಳ ವ್ಲಾಗರ್ ರಿಫಾ ಮೆಹ್ನು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿ ಮೆಹನಾಝ್ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಮೆಹನಾಝ್ ಗೆ ಪೊಲೀಸರು ಹಲವು ಬಾರಿ ಮನವಿ ಮಾಡಿದರೂ ಆತ ತನಿಖೆಗೆ ಹಾಜರಾಗಿಲ್ಲ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.
ಮಾರ್ಚ್ 1 ರಂದು ದುಬೈನ ಫ್ಲ್ಯಾಟ್ ನಲ್ಲಿ ರಿಫಾ ಮೆಹ್ನು ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಬಳಿಕ ಹುಟ್ಟೂರಿನಲ್ಲಿ ಮಾರ್ಚ್ 3 ರಂದು ಧಪನ ಮಾಡಲಾಗಿತ್ತು. ಈ ಮಧ್ಯೆ ದುಬೈನಲ್ಲಿ ರಿಫಾಳ ಮರಣೋತ್ತರ ಪರೀಕ್ಷೆ ನಡೆಸುವ ನೆಪದಲ್ಲಿ ಆಕೆಯ ಪತಿ ಮತ್ತು ಸ್ನೇಹಿತರು ರಿಫಾಗೆ ಮೋಸ ಮಾಡಿದ್ದಾರೆ ಎಂದು ಕುಟುಂಬ ಆರೋಪಿಸಿತ್ತು. ಕುಟುಂಬಸ್ಥರ ದೂರಿನ ಮೇರೆಗೆ ಕಾಸರಗೋಡಿನ ಆಕೆಯ ಪತಿ ಮೆಹನಾಝ್ ವಿರುದ್ಧ ಕಾಕೂರು ಪೊಲೀಸರು ಪ್ರಕರಣ ದಾಖಲಿಸಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಕಾಕೂರು ಪೊಲೀಸರು, ಮಾನಸಿಕ ಮತ್ತು ದೈಹಿಕ ಚಿತ್ರಹಿಂಸೆಯು ರಿಫಾಳ ಸಾವಿಗೆ ಕಾರಣವಾಗಿರಬಹುದು, ಈ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸುವುದೇ ಸೂಕ್ತ ಎಂದು ನಿರ್ಧರಿಸಿ ಅನುಮತಿ ನೀಡಿತ್ತು. ಕೊಲೆ ಶಂಕೆ ಹಿನ್ನೆಲೆಯಲ್ಲಿ ಆತನ ಪತಿ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.