ಕಾಪು | ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ

Prasthutha|

ಕಾಪು : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾಂಗಾಳ ಸಮೀಪ ಇಂದು ಮುಂಜಾನೆ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯೊಂದು ಉರುಳಿ ಬಿದ್ದ ಘಟನೆ ನಡೆದಿದೆ. ಡಿವೈಡರ್ ಗೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

- Advertisement -

ಶಿಕಾರಿಪುರದಿಂದ ಮಂಗಳೂರಿಗೆ ಖಾಲಿ ಗ್ಯಾಸ್ ಸಿಲಿಂಡರ್ ಗಳನ್ನು ಹೊತ್ತು ಸಾಗುತ್ತಿದ್ದ ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ. ಚಾಲಕ ನಿದ್ದೆ ಮಂಪರಿನಲ್ಲಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಲಾರಿ ನಿಯಂತ್ರಣ ಕಳೆದುಕೊಂಡಿದೆ.

ಗಾಯಗೊಂಡ ಲಾರಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Join Whatsapp