ಲಾರಿ ಬೈಕ್ ನಡುವೆ ಭೀಕರ ಅಪಘಾತ: ಸವಾರ ಮೃತ್ಯು

Prasthutha|

ಮಡಿಕೇರಿ: ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಮೃತಪಟ್ಟ ಘಟನೆ ಕುಶಾಲನಗರದ ಕೂಡ್ಲೂರು ಬಳಿ ನಡೆದಿದೆ.

- Advertisement -

ಮೃತ ವ್ಯಕ್ತಿಯನ್ನು ಗಂಗಾಧರ ಎಂದು ಗುರುತಿಸಲಾಗಿದೆ. ಈತ ಮೂಲತ ಹಾಸನ ಜಿಲ್ಲೆಯ ಅರಸಿಕೆರೆಯವನಾಗಿದ್ದ. ಕುಶಾಲನಗರದಲ್ಲಿ ವಿದ್ಯುತ್ ಕಂಬದ ಕೆಲಸ ಮಾಡುತ್ತಿದ್ದ. ಗುರುವಾರ ರಾತ್ರಿ ಕೆಲಸ ಮುಗಿಸಿ ವಾಪಸ್ ರೂಮಿಗೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ.

ಘಟನೆ ಸಂಬಂಧಿಸಿದಂತೆ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ