Home ಟಾಪ್ ಸುದ್ದಿಗಳು ಲಾರಿ ಬೈಕ್ ನಡುವೆ ಭೀಕರ ಅಪಘಾತ: ಸವಾರ ಮೃತ್ಯು

ಲಾರಿ ಬೈಕ್ ನಡುವೆ ಭೀಕರ ಅಪಘಾತ: ಸವಾರ ಮೃತ್ಯು

ಮಡಿಕೇರಿ: ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಮೃತಪಟ್ಟ ಘಟನೆ ಕುಶಾಲನಗರದ ಕೂಡ್ಲೂರು ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಗಂಗಾಧರ ಎಂದು ಗುರುತಿಸಲಾಗಿದೆ. ಈತ ಮೂಲತ ಹಾಸನ ಜಿಲ್ಲೆಯ ಅರಸಿಕೆರೆಯವನಾಗಿದ್ದ. ಕುಶಾಲನಗರದಲ್ಲಿ ವಿದ್ಯುತ್ ಕಂಬದ ಕೆಲಸ ಮಾಡುತ್ತಿದ್ದ. ಗುರುವಾರ ರಾತ್ರಿ ಕೆಲಸ ಮುಗಿಸಿ ವಾಪಸ್ ರೂಮಿಗೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ.

ಘಟನೆ ಸಂಬಂಧಿಸಿದಂತೆ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Join Whatsapp
Exit mobile version