ಗುಜರಿ ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿ ಬೆಂಕಿಗಾಹುತಿ

Prasthutha|

ಮಡಿಕೇರಿ: ಗುಜರಿ ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿ ಬೆಂಕಿಗಾಹುತಿಯಾದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದ ಬಳಿ ನಡೆದಿದೆ.

- Advertisement -

ಕೋಯಮತ್ತೂರಿನಿಂದ ಮಂಗಳೂರಿಗೆ ಬರುತ್ತಿದ್ದ ಲಾರಿಯಲ್ಲಿ ಮಾರ್ಗಮಧ್ಯೆ ತಾಂತ್ರಿಕ‌ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಚಾಲಕ ಕುಶಾಲನಗರದ ಬಳಿ ನಿಲ್ಲಿಸಿದ್ದರು. ಗುರುವಾರ ಬೆಳಗಿನ ಜಾವ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಬೆಂಕಿ ಲಾರಿಯನ್ನು ಆಹುತಿ ಪಡೆದಿದೆ.

ಲಾರಿಯಲ್ಲಿ ಗುಜರಿ ತುಂಬಿಸಲಾಗಿತ್ತು. ಹಾಗಾಗಿ ತಕ್ಷಣ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

- Advertisement -

ವಿಷಯ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಆದರೂ ಅಷ್ಟರದಲ್ಲೇ ಲಾರಿ ಸಂಪೂರ್ಣ ಸುಟ್ಟುಹೋಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕುಶಾಲನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Join Whatsapp