ಲಾರಿ ಡಿಕ್ಕಿ ಹೊಡೆದು ಆಟೋದಲ್ಲಿದ್ದ ನಾಲ್ಕು ಮಂದಿ ಮೃತ್ಯು

Prasthutha|

ವಾರಂಗಲ್:  ಲಾರಿಯೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಆಟೋದಲ್ಲಿದ್ದ ನಾಲ್ವರು ಮೃತಪಟ್ಟ ದಾರುಣ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಅರಣ್ಯ ಪ್ರದೇಶದಲ್ಲಿ ಜೇನು ಸಂಗ್ರಹಿಸಿ ಎಂದಿನಂತೆ ಅದನ್ನು ಪಟ್ಟಣದಲ್ಲಿ ಮಾರಾಟ ಮಾಡಲು ಇಂದು ಬುಧವಾರ ಬೆಳಗ್ಗೆ ಆಟೋದಲ್ಲಿ ನಾಲ್ವರು ಹೊರಟಿದ್ದರು. ಎದುರಿನಿಂದ ಬಂದ ಲಾರಿ ರಿಕ್ಷಾಗೆ ಡಿಕ್ಕಿ ಹೊಡೆದು ಆಟೋದಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ವರ್ದನ್ನಪೇಟೆ ಮಂಡಲದ ಇಲ್ಲಂಡ ಗ್ರಾಮದ ಸಮೀಪ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾರಂಗಲ್-ಖಮ್ಮಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ವೇಗವಾಗಿ ಬಂದ ಲಾರಿಯೊಂದು ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಚಾಲಕ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇತರ ಆರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದರಿಂದ ಆಟೋ ನಜ್ಜುಗುಜ್ಜಾಗಿದೆ.

- Advertisement -

ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರೆಲ್ಲರೂ ಜೇನು ಮಾರಾಟಗಾರರು ಎಂದು ಪೊಲೀಸರು ತಿಳಿಸಿದ್ದಾರೆ. ಆಟೋದಲ್ಲಿ ಜೇನು ಸಮೇತ ವಾರಂಗಲ್ ಕಡೆಗೆ ಬರುತ್ತಿದ್ದಾಗ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತರ ವಿವರ ಇನ್ನಷ್ಟೇ ತಿಳಿಯಬೇಕಿದೆ.

ರಾಜಸ್ಥಾನ ಮೂಲದ ಲಾರಿ ಚಾಲಕ ಮದ್ಯದ ಅಮಲಿನಲ್ಲಿ ಮಲಗಿದ್ದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಚಾಲಕ ಕುಡಿದ ಮತ್ತಿನಲ್ಲಿ ಎದುರಿಗೆ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದರಿಂದ ಆಟೋದಲ್ಲಿದ್ದವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

Join Whatsapp