ಶಿಕ್ಷಣ ಸಂಸ್ಥೆ ಆರಂಭಿಸಿ ನಷ್ಟ| ಕಾಲೇಜು ಮಾಲೀಕ ನೇಣಿಗೆ ಶರಣು

Prasthutha: September 29, 2021

ಬೆಂಗಳೂರು: ಪದವಿ ಕಾಲೇಜು ತೆರೆದು‌ ನಷ್ಟವುಂಟಾಗಿ ವ್ಯಕ್ತಿಯೊಬ್ಬರು ಕಾಲೇಜಿನಲ್ಲಿಯೇ ನೇಣಿಗೆ ಶರಣಾಗಿರುವ ಘಟನೆ ಟಿ.ದಾಸರಹಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೆಂಪಾಪುರದ ಮಂಜುನಾಥ್(31) ಎಂದು ಗುರುತಿಸಲಾಗಿದೆ. ಮಂಜುನಾಥ್ ಡೆತ್​ನೋಟ್ ಬರೆದಿಟ್ಟು ಕಾಲೇಜಿನಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪದವಿ ಕಾಲೇಜು ಆರಂಭದಿಂದ 20 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾದ ಹಿನ್ನೆಲೆಯಲ್ಲಿ ಸಹಭಾಗಿತ್ವ ಹೊಂದಿರುವವರು ಮಾನಸಿಕವಾಗಿ ಕಿರುಕುಳ ಕೊಡುತ್ತಿದ್ದರು ಎಂದು ಮೃತ ಮಂಜುನಾಥ್ ಡೆತ್ ನೋಟ್ ನಲ್ಲಿ ಬರೆದಿದ್ದಾರೆ.

ಚಂದ್ರು ಮತ್ತು ಮಲ್ಲಿಕಾರ್ಜುನ ಎಂಬವರ ಜೊತೆ ಸೇರಿ ಮಂಜುನಾಥ್ ಕಾಲೇಜು ಆರಂಭ ಮಾಡಿದ್ದು ಕೊರೊನಾ ಹಿನ್ನೆಲೆ ಕಾಲೇಜು ನಡೆಸಲು ಕಷ್ಟವಾಗಿ ಹಣಕಾಸಿನ ತೀವ್ರ ತೊಂದರೆ ಎದುರಾಗಿತ್ತು. ಇದರಿಂದಾಗಿ ತೀವ್ರ ಮನನೊಂದ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮೃತ ಮಂಜುನಾಥ್ 8 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದು ಪತ್ನಿಗೆ ಕಾಲೇಜು ಬಳಿ ಹೋಗುವುದಾಗಿ ತಿಳಿಸಿದ್ದರು.ಹಲವು ಗಂಟೆಗಳು ಕಳೆದರೂ ಮನೆಗೆ ಬರದ ಹಿನ್ನೆಲೆಯಲ್ಲಿ ಪತ್ನಿ ಕಾಲೇಜು ಬಳಿ ಬಂದು ನೋಡಿದಾಗ ಮಂಜುನಾಥ್ ನೇಣಿಗೆ ಶರಣಾಗಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ‌ಬಾಗಲಗುಂಟೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಮಂಜುನಾಥ್ ಜೊತೆಗೆ ಸಹಭಾಗಿತ್ವ ಹೊಂದಿದ್ದ ಚಂದ್ರು ಹಾಗೂ ಮಲ್ಲಿಕಾರ್ಜುನ ವಿರುದ್ಧ ಕಿರುಕುಳ ದೂರು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!