Home ಟಾಪ್ ಸುದ್ದಿಗಳು ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ವಿಚಾರ: ಸರ್ಕಾರದ ವಿವರಣೆ ಕೇಳಿದ ಹೈಕೋರ್ಟ್

ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ವಿಚಾರ: ಸರ್ಕಾರದ ವಿವರಣೆ ಕೇಳಿದ ಹೈಕೋರ್ಟ್

ಬೆಂಗಳೂರು: ಮಸೀದಿಗಳಲ್ಲಿ ಧ್ವನಿ ವರ್ಧಕ ಬಳಕೆ ಕುರಿತು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದೆ. ರಾತ್ರಿ ಹತ್ತು ಗಂಟೆಯಿಂದ ಬೆಳಗ್ಗೆ ಆರು ಗಂಟೆ ಸಮಯದಲ್ಲಿ ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಸಂಬಂಧ ಸಮಗ್ರ ವಿವರ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಮಸೀದಿಗಳಲ್ಲಿ ಬೆಳಗಿನ ಜಾವ ಧ್ವನಿವರ್ಧಕ ಹಾಕಲಾಗುತ್ತದೆ. ಮಸೀದಿಗಳಲ್ಲಿ ಎಷ್ಟು ಡೆಸಿಬಲ್ ಶಬ್ದದೊಂದಿಗೆ ಧ್ವನಿವರ್ಧಕ ಬಳಕೆ ಕುರಿತು ವಕ್ಫ್ ಮಂಡಳಿ ಆದೇಶ ಹೊರಡಿಸಿದೆ. ಯಾವ ಕಾನೂನು ಅಡಿಯಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ. ಈ ಕುರಿತು ಸರ್ಕಾರ ವಿವರಣೆ ನೀಡಬೇಕು.

ಮಸೀದಿಗಳಲ್ಲಿ ಬೆಳಗಿನ ಜಾವ ಧ್ವನಿವರ್ಧಕ ಹಾಕುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತಿದೆ ಎಂದು ಹೈಕೋರ್ಟ್‌ನಲ್ಲಿ ರಿಟ್ ಸಲ್ಲಿಸಲಾಗಿದ್ದು ಅರ್ಜಿ ವಿಚಾರಣೆ ನಡೆಯುತ್ತಿದೆ. ಈ ಕುರಿತು ಹೊರಡಿಸಿರುವ ಆದೇಶ ಮತ್ತು ಕೈಗೊಂಡಿರುವ ಕ್ರಮ ಕುರಿತು ವರದಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

Join Whatsapp
Exit mobile version