ಪ್ರೇಮ ಪ್ರಕರಣ: ಸಮುದಾಯಗಳ ನಡುವೆ ಘರ್ಷಣೆ; ಇಬ್ಬರ ಸಾವು

Prasthutha|

ಕೊಪ್ಪಳ: ಅಂತರ್ ಧರ್ಮೀಯ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಸಮುದಾಯಗಳ ಮಧ್ಯೆ ಘರ್ಷಣೆ ಉಂಟಾಗಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಿಂದ ವರದಿಯಾಗಿದೆ.

- Advertisement -

ಅಂತರ್ ಧರ್ಮೀಯ ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಕೊಪ್ಪಳದಲ್ಲಿ ಎರಡು ಸಮುದಾಯದ ನಡುವೆ ಘರ್ಷಣೆ ಏರ್ಪಟ್ಟಿದೆ. ಈ ಘರ್ಷಣೆಯಲ್ಲಿ ಸ್ಥಳೀಯ ನಿವಾಸಿ ಶಾಮಪ್ಪ ತಳವಾರ್ ಮತ್ತು ಬಾಷಾ ಸಾಹೇಬ್ ಎಂಬವರು ಸಾವನ್ನಪ್ಪಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿವೆ.

ಅಲ್ಲದೆ, ಘಟನೆಯಲ್ಲಿ ಆರು ಮಂದಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಕೊಪ್ಪಳದ ಹೈದರ್ ಎಂಬ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

- Advertisement -

ಸ್ಥಳದಲ್ಲಿ ಪೊಲೀಸರು ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಯೋಜನೆ ರೂಪಿಸುತ್ತಿದ್ದಾರೆ.



Join Whatsapp