ಹೈದರಾಬಾದ್: ನಟಿಯೊಬ್ಬರು ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಬಂಜಾರ ಹಿಲ್ಸ್ ನಲ್ಲಿ ನಡೆದಿದೆ.
ಮೃತ ಯುವತಿಯನ್ನು ಅನುರಾಧಾ (22 ) ಎಂದು ಗುರುತಿಸಲಾಗಿದೆ.
ಅನುರಾಧಾ ಅವರು ತೆಲುಗು ಚಿತ್ರಗಳಲ್ಲಿ ಜೂನಿಯರ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಈಕೆಯ ಜೊತೆ ಕೆಲಸ ಮಾಡುತಿದ್ದ ಕಿರಣ್ ಎಂಬವರನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಮದುವೆ ಮಾಡಿಕೊಳ್ಳಬೇಕೆಂದು ನಿರ್ಧರಿಸಿದ್ದರು. ಆದರೆ ಕಳೆದ ಕೆಲ ದಿನಗಳ ಹಿಂದೆ ಕಿರಣ್, ಅನುರಾಧಾ ಜೊತೆಗಿನ ಸಂಬಂಧ ಕಡಿದುಕೊಂಡಿದ್ದ. ಹೀಗಾಗಿ ಆಕೆ ಮಾನಸಿಕ ಖಿನ್ನತೆಗೊಳಗಾಗಿದ್ದರು ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಕನ್ನಡ ಕಿರುತೆರೆ ನಟಿ ಸೌಜನ್ಯ ಅಪಾರ್ಟ್ ಮೆಂಟ್ ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.