Home ಟಾಪ್ ಸುದ್ದಿಗಳು ಲವ್ ಜಿಹಾದ್ ಗೆ 10 ವರ್ಷ ಜೈಲು, 1 ಲಕ್ಷ ರೂ. ದಂಡ: ಯುಪಿ ಚುನಾವಣೆಯ...

ಲವ್ ಜಿಹಾದ್ ಗೆ 10 ವರ್ಷ ಜೈಲು, 1 ಲಕ್ಷ ರೂ. ದಂಡ: ಯುಪಿ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿ ಘೋಷಣೆ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಲವ್ ಜಿಹಾದ್ ಗೆ ಕನಿಷ್ಠ 10 ವರ್ಷಗಳ ಜೈಲು ಶಿಕ್ಷೆಯೊಂದಿಗೆ 1 ಲಕ್ಷ ರೂಪಾಯಿ ದಂಡ ವಿಧಿಸುವ ಕಾನೂನು ತರುವುದಾಗಿ  ಭರವಸೆ ನೀಡಿದೆ.

ಪಂಜಾಬ್ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ 5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ಭರವಸೆ ನೀಡಿದೆ.

ಎಲ್ಲಾ ಮನೆಗಳಿಗೆ 300 ಯೂನಿಟ್ ಗಳವರೆಗೆ ಉಚಿತ ವಿದ್ಯುತ್ ನೀಡುವುದರ ಜೊತೆಗೆ, ಹಣ್ಣುಗಳು, ತರಕಾರಿಗಳು, ಬೇಳೆಕಾಳುಗಳು ಮತ್ತು ಎಣ್ಣೆಕಾಳುಗಳನ್ನು ಬೆಳೆಯುವ ರೈತರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನೀಡುವುದಾಗಿ ಭರವಸೆ ನೀಡಿದೆ.

 ನೀರಾವರಿಗಾಗಿ ರೈತರಿಗೆ ಉಚಿತ ವಿದ್ಯುತ್ ಭರವಸೆ ನೀಡಲಾಗಿದೆ. ಎಂಎಸ್ಪಿಯಲ್ಲಿ ಗೋಧಿ ಮತ್ತು ಭತ್ತದ ಖರೀದಿಗೆ ಕ್ರಮಕೈಗೊಳ್ಳುತ್ತದೆ. ಪ್ರಧಾನಮಂತ್ರಿಯವರ ಉಜ್ವಲ ಯೋಜನೆಯಡಿ, ದೀಪಾವಳಿ ಮತ್ತು ಹೋಳಿ ಸಂದರ್ಭದಲ್ಲಿ ಪಕ್ಷವು ಎರಡು ಉಚಿತ ಎಲ್ಪಿಜಿ ಸಿಲಿಂಡರ್ ಗಳನ್ನು ಒದಗಿಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ.

Join Whatsapp
Exit mobile version