‘ಹಿಂದೂಗಳೂ ಮುಸ್ಲಿಂ ಯುವತಿಯರನ್ನು ಲವ್ ಮಾಡಿ ಮತಾಂತರ ಮಾಡಬೇಕಾಗುತ್ತೆ’: ಪ್ರಚೋದನಕಾರಿ ಹೇಳಿಕೆ ನೀಡಿದ ಸ್ವಾಮೀಜಿ

Prasthutha|

ಬೆಂಗಳೂರು: ಮುಸ್ಲಿಮರಿಗಷ್ಟೆ ಗಂಡಸ್ತನ, ಮೀಸೆ ಇರುವುದಲ್ಲ. ಹಿಂದೂ ಹುಡುಗರಿಗೂ ಇದೆ. ಹಿಂದೂ ಹುಡುಗರು ಕೂಡ ಮುಸ್ಲಿಂ ಹುಡುಗಿಯರನ್ನ ಲವ್ ಮಾಡಿ ಮತಾಂತರ ಮಾಡಬೇಕಾಗುತ್ತದೆ ಎಂದು ಸಿದ್ದರೂಢ ಇಂಟರ್ನ್ಯಾಷನಲ್ ಗುರುಕುಲಮ್​ನ ಆರೂಢ ಭಾರತೀ ಸ್ವಾಮೀಜಿ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

- Advertisement -

ಕಾಂಗ್ರೆಸ್ ಸರ್ಕಾರವು ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸ್ ಪಡೆಯಲು ಮುಂದಾಗುತ್ತಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಇಂದು ಸಂತರ ಸಭೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯ ನಂತರ ಹಿಂದೂ, ಜೈನ, ಸಿಖ್, ಬೌದ್ದರ ಜನಸಂಖ್ಯೆ ಇಳಿಕೆಯಾಗುತ್ತಿದೆ. ಮುಸ್ಲಿಂ, ಕ್ರೈಸ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಬಲವಂತದ ಮತಾಂತರದ ಸಂಕೇತ ಎಂದರು.

ಮುಸ್ಲಿಂ, ಕ್ರಿಶ್ಚಿಯನ್ನರ ಸಂಖ್ಯೆ ಹೆಚ್ಚಾಗಿದ್ದೆ ಹಿಂದೂಗಳಿಂದ. ಲವ್ ಜಿಹಾದ್, ಮತಾಂತರ ಮೂಲಕ ಜನಸಂಖ್ಯೆ ಹೆಚ್ಚು ಮಾಡುತ್ತಿದ್ದಾರೆ. ಸ್ವಪ್ರೇರಣೆಯಿಂದ ಮತಾಂತರ ಆದರೆ ತಪ್ಪಿಲ್ಲ. ಆದರೆ ಬಲವಂತವಾಗಿ ಮಾಡುವುದು ಅಪರಾಧ. ಹಿಂದೂಗಳು ಸಂಕುಚಿತ ಅಲ್ಲ ಎಂದು ಸ್ವಾಮೀಜಿ ಹೇಳಿದರು.

- Advertisement -

ನಾನು ಬೈಬಲ್ ಹಾಗೂ ಕುರಾನ್ ಓದಿದ್ದೇನೆ. ಹಿಂದೂಗಳ ದೇವಸ್ಥಾನ, ಮಂದಿರಗಳನ್ನು ಒಡೆದು ಹಾಕಿ, ಆ ಧರ್ಮದ ಅನುಯಾಯಿಗಳು ನೆಲೆ‌ನಿಲ್ಲದಂತೆ ನಾಶ ಮಾಡಬೇಕು ಅಂತ ಬೈಬಲ್​ನಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಇದರಿಂದ ಮುಸ್ಲಿಮರು ಕೂಡ ಹೊರತಾಗಿಲ್ಲ ಎಂದು ಭಾರತೀ ಸ್ವಾಮೀಜಿ ಹೇಳಿದರು.



Join Whatsapp