Home ಟಾಪ್ ಸುದ್ದಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ: ಪ್ರಿಯಕರ ಸಾವು, ಯುವತಿ ಸ್ಥಿತಿ ಗಂಭೀರ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ: ಪ್ರಿಯಕರ ಸಾವು, ಯುವತಿ ಸ್ಥಿತಿ ಗಂಭೀರ

ಚಾಮರಾಜನಗರ: ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹನೂರು ತಾಲೂಕಿನ ಹೊಗೆನಕಲ್ ಫಾಲ್ಸ್ ಬಳಿ ನಡೆದಿದೆ.


ಕನಕಪುರ ಮೂಲದ ಉಮೇಶ್ (24) ಮೃತಪಟ್ಟಿದ್ದರೆ, ರಕ್ಷಿತಾ (16) ಸ್ಥಿತಿ ಗಂಭೀರವಾಗಿದೆ.


ಹೊಗೆನಕಲ್ ಫಾಲ್ಸ್ ಬಳಿ ಉಮೇಶ್ ಹಾಗೂ ರಕ್ಷಿತಾ ವಿಷ ಸೇವಿಸಿ ಬಿದ್ದು ಒದ್ದಾಡುತ್ತಿದ್ದರು. ಬಂಡೆಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದವರನ್ನು ಸ್ಥಳೀಯರು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಉಮೇಶ್ ವಿಷ ಕುಡಿದು ಬಹಳ ಸಮಯವಾಗಿದ್ದರಿಂದ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ. ಸಾವು ಬದುಕಿನ ನಡುವೆ ಹೊರಾಡುತ್ತಿರುವ ರಕ್ಷಿತಾಗೆ ತಮಿಳುನಾಡಿನ ಧರ್ಮಪುರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರೇಮಿಗಳಿಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Join Whatsapp
Exit mobile version