ಪ್ರಿಯಕರನ ಸಾವಿನಿಂದ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ !

Prasthutha|

ತುಮಕೂರು: ಪ್ರಿಯಕರನ ಸಾವಿನಿಂದ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

- Advertisement -

ಧನುಷ್(23), ಸುಷ್ಮಾ(22) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಧನುಷ್ ಮತ್ತು ಸುಷ್ಮಾ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದು, ಇಬ್ಬರು ಸೇರಿ ಮದುವೆಗೆ ಮನೆಯವರನ್ನು ಒಪ್ಪಿಸಿದ್ದರು. ಆದರೆ ಮೇ 11 ರಂದು ಧನುಷ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಮೇ 14 ರಂದು ರಾತ್ರಿ ಸುಷ್ಮಾ ವಿಷ ಸೇವಿಸಿ ಸಾವನ್ನಪ್ಪಿದ್ದಾಳೆ.

ಸುಷ್ಮಾ ಎಂ.ಕಾಂ ವಿದ್ಯಾಭ್ಯಾಸ ಮಾಡುತ್ತಿದ್ದು, ಬೆಂಗಳೂರಿನಲ್ಲಿ ಧನುಷ್ ಸ್ವಂತ ಬಟ್ಟೆ ಅಂಗಡಿ ಇಟ್ಟಿದ್ದರು. ಇವರಿಬ್ಬರ ಪ್ರೀತಿಯ ವಿಚಾರ ಮನೆಯಲ್ಲಿ ತಿಳಿದ ನಂತರ ಮನೆಯವರು ಮದುವೆ ನಿಶ್ಚಯ ಮಾಡಿದ್ದರು.



Join Whatsapp