ಒಂದೇ ಕಾಲೇಜಿನಲ್ಲಿ ಓದುತ್ತಿದ್ದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ !

Prasthutha|

ಹುಬ್ಬಳ್ಳಿ: ಒಂದೇ ಕಾಲೇಜಿನಲ್ಲಿ ಓದುತ್ತಿದ್ದ ಪ್ರೇಮ ಜೋಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

- Advertisement -


ಉತ್ತರಕನ್ನಡ ಜಿಲ್ಲೆ ಹಳಿಯಾಳ ಮೂಲದ ಜ್ಯೋತಿ ಸುರೇಶ ಅಂತ್ರೋಳಕರ(19) ಮತ್ತು ರಿಕೇಶ್ ಸುರೇಶ ಮಿರಾಶಿ(20) ದುರಂತ ಅಂತ್ಯ ಕಂಡವರು ಎಂದು ತಿಳಿದು ಬಂದಿದೆ.


ಇವರಿಬ್ಬರೂ ಹಳಿಯಾಳದ ಹವಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ತಿಂಗಳ ಹಿಂದೆ ಪಾಲಕರು ಯುವತಿಗೆ ಬೇರೊಬ್ಬ ಯುವಕನ ಜತೆ ಮದುವೆ ಮಾಡಿದ್ದರು.ಆದರೆ ಪ್ರಿಯಕರನನ್ನು ಬಿಟ್ಟು ಬದುಕಲಾಗದ ಜ್ಯೋತಿ ಜುಲೈ 15ರಂದು ಮುಂಡಗೋಡು ರಸ್ತೆಯಲ್ಲಿ ಪ್ರಿಯಕರ ರಿಕೇಶ್ ಜೊತೆ ವಿಷ ಸೇವಿಸಿದ್ದಳು. ತೀವ್ರ ಅಸ್ವಸ್ಥಗೊಂಡ ಪ್ರೇಮಿಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಪ್ರೇಮಿಗಳು ಇಂದು ಮೃತಪಟ್ಟಿದ್ದಾರೆ.

- Advertisement -


ಈ ಬಗ್ಗೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp