Home ರಾಜ್ಯ ಲಿವಿಂಗ್ ಇನ್ ಟುಗೆದರ್ ನಲ್ಲಿದ್ದ ಪ್ರೇಮಿಗಳು ಆತ್ಮಹತ್ಯೆ

ಲಿವಿಂಗ್ ಇನ್ ಟುಗೆದರ್ ನಲ್ಲಿದ್ದ ಪ್ರೇಮಿಗಳು ಆತ್ಮಹತ್ಯೆ

ಬೆಂಗಳೂರು : ತಮ್ಮ ಪ್ರೀತಿಗೆ ಕುಟುಂಬದವರಿಂದ ವಿರೋಧದ ಹಿನ್ನೆಲೆಯಲ್ಲಿ ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ (ವಿವಾಹಿತೆ) ಹಾಗೂ ಆಕೆಯ ಗೆಳೆಯ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಮೃತರನ್ನು ಪಶ್ಚಿಮ ಬಂಗಾಳ ಮೂಲದ ಸೌಮಿನಿ ದಾಸ್ (20) ಹಾಗೂ ಕೇರಳದ ಅಭಿಲ್ ಅಬ್ರಹಾಂ (29) ಎಂದು ಗುರುತಿಸಲಾಗಿದೆ.

ಭಾನುವಾರ ಸೌಮಿನಿ ದಾಸ್ಗೆ ತನ್ನ ಗಂಡನಿಂದ ಫೋನ್ ಬಂದಿದೆ. ಪೋನ್ನಲ್ಲೇ ಸೌಮಿನಿ ಹಾಗೂ ಗಂಡನ ನಡುವೆ ಜಗಳ ಆಗಿದ್ದು, ಕಿರುಚಾಟ, ಕೂಗಾಟ ನಡೆಸಿದ್ದಾರೆ. ಇದರಿಂದ ಅಕ್ಕಪಕ್ಕದ ಮನೆಯವರು ಬಂದು ನೋಡಿದ್ದು, ಇಬ್ಬರೂ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಸೌಮಿರಾ ದಾಸ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ತೀವ್ರ ಗಾಯಗೊಂಡ ಅಭಿಲ್ ಅಬ್ರಾಹಂ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆತ ಸಹ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp
Exit mobile version