Home ಟಾಪ್ ಸುದ್ದಿಗಳು ಅಂಡರ್ ಪಾಸ್ ನಲ್ಲಿ ಸಿಲುಕಿದ ಎಲ್ ಪಿಜಿ ಟ್ಯಾಂಕರ್: ಗ್ಯಾಸ್ ಸೋರಿಕೆ

ಅಂಡರ್ ಪಾಸ್ ನಲ್ಲಿ ಸಿಲುಕಿದ ಎಲ್ ಪಿಜಿ ಟ್ಯಾಂಕರ್: ಗ್ಯಾಸ್ ಸೋರಿಕೆ

ಧಾರವಾಡ: ಎಲ್ ಪಿಜಿ ಟ್ಯಾಂಕರ್ ಒಂದು ಅಂಡರ್ ಪಾಸ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಸೇತುವೆಗೆ ತಾಗಿ ಗ್ಯಾಸ್ ಲೀಕ್ ಆಗಿರುವ ಘಟನೆ ಧಾರವಾಡದ ಬೇಲೂರು ಗ್ರಾಮದ ಬಳಿಯ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಸಂಭವಿಸಿದೆ.


ಸುರಕ್ಷತಾ ದೃಷ್ಟಿಯಿಂದ ಈ ಭಾಗದಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.


ಜಿಲ್ಲಾ ಪೊಲೀಸ್, ಅಗ್ನಿಶಾಮಕ ಮತ್ತು ತುರ್ತು ಸೇವೆ, ಮತ್ತು ವಿಪತ್ತು ನಿರ್ವಹಣಾ ತಂಡಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ದೊಡ್ಡ ದುರಂತವನ್ನು ತಪ್ಪಿಸಲು ಹರಸಾಹಸ ಪಡುತ್ತಿವೆ.

Join Whatsapp
Exit mobile version