ನವದೆಹಲಿ: ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ತೂಕ ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಎಲ್ ಪಿಜಿ ಸಿಲಿಂಡರ್ ಭಾರವಾಗಿರುವುದರಿಂದ ಅವುಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಾಟ ಮಾಡುವುದು ಕಷ್ಟದ ಕೆಲಸ. ಮುಖ್ಯವಾಗಿ ಮಹಿಳೆಯರಿಗೆ ಗ್ಯಾಸ್ ಸಿಲಿಂಡರ್ ಗಳನ್ನು ಕೊಂಡೊಯ್ಯುವುದೇ ದೊಡ್ಡ ಸಮಸ್ಯೆ. ಈ ಸಮಸ್ಯೆ ಪರಿಹಾರ ಮಾಡುವ ನಿಟ್ಟಿನಲ್ಲಿ ಸರ್ಕಾರ ಶೀಘ್ರದಲ್ಲೇ ಅವುಗಳ ತೂಕವನ್ನು ಕಡಿಮೆ ಮಾಡುವ ಸುಳಿವನ್ನು ನೀಡಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ರಾಜ್ಯಸಭೆಯಲ್ಲಿ ಮಾತನಾಡಿದ್ದು, ಪ್ರಸ್ತುತ 14.2 ಕೆಜಿ ತೂಕದ ಸಿಲಿಂಡರ್ಗಳನ್ನು 5 ಕೆಜಿ ಗೆ ಇಳಿಸುವುದಾಗಿ ಇಲ್ಲವೇ ಬೇರೆ ಮಾರ್ಗದ ಮೂಲಕ ಈ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.