ಲಕ್ನೋ: ಇ ಡಿ ಪ್ರಕರಣದಲ್ಲಿ ಸಿದ್ದೀಕ್ ಕಾಪ್ಪನ್ ಅವರ ಜಾಮೀನು ಅರ್ಜಿಯನ್ನು ಲಕ್ನೋ ನ್ಯಾಯಾಲಯ ತಿರಸ್ಕರಿಸಿದೆ. ಯುಎಪಿಎ ಪ್ರಕರಣದಲ್ಲಿ ಕಾಪ್ಪನ್ ಅವರಿಗೆ ಈ ಹಿಂದೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಆದರೆ, ಇದೇ ಪ್ರಕರಣದಲ್ಲಿ ಕಾಪ್ಪನ್ ಜೊತೆಗಿದ್ದ ಆಲಂಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕಳೆದ ಸೆಪ್ಟೆಂಬರ್ 9 ರಂದು ಯುಎಪಿಎ ಪ್ರಕರಣದಲ್ಲಿ ಸಿದ್ದೀಕ್ ಕಾಪ್ಪನ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಜಾಮೀನು ನೀಡಲಾಗಿದ್ದರೂ, ಆರು ವಾರಗಳ ಕಾಲ ದೆಹಲಿಯಲ್ಲಿ ಉಳಿದು, ನಂತರ ಕೇರಳಕ್ಕೆ ಹೋಗಬಹುದು ಎಂದು ನ್ಯಾಯಾಲಯ ಹೇಳಿತ್ತು. ಆದರೆ ಈಗ ಇಡಿ ಪ್ರಕರಣದಲ್ಲಿ ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡಿರುವುದರಿಂದ, ಕಾಪ್ಪನ್ ಅವರು ಇನ್ನೂ ಜೈಲಿನಲ್ಲಿ ಕಾಲ ಕಳೆಯಬೇಕಾಗಿದೆ.