ಮಂಗಳೂರು: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿದೆಡೆ ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ ಮಾಡುತ್ತಿವೆ.
ಬಂದ್ ನಿಂದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಕರಾವಳಿಯಲ್ಲಿ ಬಂದ್ ಗೆ ನೇರವಾಗಿ ಇಂಗಿತ ವ್ಯಕ್ತವಾಗಿಲ್ಲ. ನೈತಿಕ ಬೆಂಬಲವಷ್ಟೇ ನೀಡಿದ್ದು, ಹೀಗಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸುತ್ತಿದೆ. ಜನಜೀವನ ಯಥಾಸ್ಥಿತಿ ಮುಂದುವರೆದಿದೆ.
ಜಿಲ್ಲೆಯ ಯಾವುದೇ ರಾಜಕೀಯ ಪಕ್ಷ, ಸಂಘಟನೆಗಳಾಗಲೀ ಬಂದ್ ಗೆ ಬೆಂಬಲ ಸೂಚಿಸಿ ಯಾವುದೇ ಹೇಳಿಕೆಯನ್ನೂ ನೀಡಿಲ್ಲ. ಖಾಸಗಿ ಬಸ್, ಆಟೋರಿಕ್ಷಾಗಳು ಎಂದಿನಂತೆ ಸಂಚರಿಸಿದೆ. ವ್ಯಾಪಾರಸ್ಥರು ಕೂಡಾ ಬಂದ್ ಮಾಡುವ ನಿಟ್ಟಿನಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಬಸ್ ಸಂಚಾರ ಬಂದ್ ಮಾಡುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಸಾರ್ವಜನಿಕ ಜೀವನಕ್ಕೆ ಕಷ್ಟವಾಗಲಿದೆ ಬಸ್ ಓಡಾಟ ಎಂದಿನಂತೆ ಇರಲಿದೆ ಎಂದು ಖಾಸಗಿ ಬಸ್ ಒಕ್ಕೂಟ ತಿಳಿಸಿದೆ.