ದ.ಕ. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಲುಕ್ಮಾನ್ ಬಂಟ್ವಾಳ ಆಯ್ಕೆ

Prasthutha|

ಮಂಗಳೂರು : ದ.ಕ. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಲುಕ್ಮಾನ್ ಬಂಟ್ವಾಳ ಆಯ್ಕೆಯಾಗಿದ್ದಾರೆ. ಕಳೆದ ತಿಂಗಳು ನಡೆದಿದ್ದ ಯುವ ಕಾಂಗ್ರೆಸ್ ಚುನಾವಣಾ ಫಲಿತಾಂಶ ಇಂದು ಹೊರಬಿದ್ದಿದ್ದು, ಲುಕ್ಮಾನ್ ಬಂಟ್ವಾಳ ದ.ಕ. ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

- Advertisement -

ಅಧ್ಯಕ್ಷರಾಗಿ ಆಯ್ಕೆಯಾದ ಲುಕ್ಮಾನ್ ಬಂಟ್ವಾಳ 5,573 ಮತಗಳನ್ನು ಪಡೆದಿದ್ದಾರೆ. ಅವರ ನಿಕಟಸ್ಪರ್ಧಿ ಗಿರೀಶ್ ಆಳ್ವಾ 4,169 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮುಹಮ್ಮದ್ ಶುಹೈಬ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ ಎಂದು ಭಾರತೀಯ ಯುವ ಕಾಂಗ್ರೆಸ್ ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಒಟ್ಟು 14,065 ಮತಗಳಲ್ಲಿ 3,158 ಮತಗಳು ತಿರಸ್ಕೃತಗೊಂಡಿವೆ. ಜ.10, 11, 12ರಂದು ರಾಜ್ಯಾದ್ಯಂತ ಯುವ ಕಾಂಗ್ರೆಸ್ ಬ್ಲಾಕ್, ಜಿಲ್ಲೆ ಮತ್ತು ರಾಜ್ಯ ಮಟ್ಟದ ಪದಾಧಿಕಾರಿಗಳ ಆಯ್ಕೆಗಾಗಿ ನಡೆದಿತ್ತು. ಚುನಾವಣೆಯ ಪಾರದರ್ಶಕವಾಗಿ ನಡೆಯಬೇಕೆಂಬ ನಿಟ್ಟಿನಲ್ಲಿ ಮೊಬೈಲ್ ಅಪ್ಲಿಕೇಶನ್ ಮೂಲಕ ಚುನಾವಣೆ ನಡೆಸಲಾಗಿತ್ತು.

Join Whatsapp