Home ಟಾಪ್ ಸುದ್ದಿಗಳು ಮತದಾರರಿಗೆ ಆಮಿಷ: ಝಮೀರ್ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಮತದಾರರಿಗೆ ಆಮಿಷ: ಝಮೀರ್ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಚಾಮರಾಜಪೇಟೆಯ ಶಾಸಕ ಝಮೀರ್ ಆಹಮದ್ ಖಾನ್ ವಿರುದ್ಧ ಸಲ್ಲಿಕೆಯಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ತನ್ನ ಪಕ್ಷ ಅಧಿಕಾರಕ್ಕೆ ಬಂದರೆ ಕೆಲ ನೀತಿ ಜಾರಿಗೊಳಿಸುವುದಾಗಿ ಭರವಸೆ ನೀಡಿರುವುದು ಪ್ರಜಾಪ್ರತಿನಿಧಿ ಕಾಯ್ದೆಯಡಿ ಮತದಾರರಿಗೆ ಆಮಿಷವೊಡ್ಡಿದಂತಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಪಂಚ ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ಜಮೀರ್ ಆಹಮದ್ ಖಾನ್ ಮತದಾರರನ್ನು ಓಲೈಸಿ ಮತ ಕೋರಿದ್ದಾರೆ. ಆ ಮೂಲಕ ಮತದಾರರಿಗೆ ಆಮಿಷವೊಡ್ಡಿದ್ದಾರೆ. ಹೀಗಾಗಿ ಅದು ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಮತದಾರರನ್ನು ಭ್ರಷ್ಟರನ್ನಾಗಿ ಮಾಡಿದಂತಾಗಿದೆ. ಆದ್ದರಿಂದ ಝಮೀರ್ ಆಹಮದ್ ಆಯ್ಕೆಯನ್ನು ಅನೂರ್ಜಿತಗೊಳಿಸಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿತ್ತು.

ಸಚಿವರು ವೈಯಕ್ತಿಕವಾಗಿ ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂಬುದಕ್ಕೆ ಸಾಕ್ಷಾೃಧಾರಗಳಿಲ್ಲ. ಪ್ರಣಾಳಿಕೆಯ ಅಂಶಗಳನ್ನು ಉಲ್ಲೇಖಿಸಿದ್ದಾರೆ. ಅದನ್ನು ಪರಿಗಣಿಸಿ ಪ್ರತಿವಾದಿ ಆಯ್ಕೆ ಅನೂರ್ಜಿತಗೊಳಿಸಲಾಗದು ಎಂದು ನ್ಯಾಯಾಲಯ ಹೇಳಿದೆ.

Join Whatsapp
Exit mobile version