ಬೆಂಗಳೂರು: ಕೊಲೆ ಆರೋಪದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ಅಲ್ಲಿ ಅವರಿಗೆ ರಾಜಾತಿಥ್ಯ ಸಿಗುತ್ತಿದೆಯಾ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡಿದೆ.
ದರ್ಶನ್ ಅವರ ಒಂದು ಫೋಟೋ ವೈರಲ್ ಆಗಿದ್ದು, ಅದರಲ್ಲಿ ಅವರು ಸಿಗರೇಟು ಸೇದುತ್ತಾ, ಕಾಫಿ ಕುಡಿಯುತ್ತಿರುವ ದೃಶ್ಯ ಸೆರೆಯಾಗಿದೆ.
ವೈರಲ್ ಆಗಿರುವ ಫೋಟೋದಿಂದ ಅನೇಕ ಅನುಮಾನಗಳು ಮೂಡಲು ಆರಂಭಿಸಿವೆ. ರೇಣುಕಾಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿಸಿದ ಆರೋಪ ದರ್ಶನ್ ಮೇಲಿದೆ.
ದರ್ಶನ್ ಅವರು ಸ್ಪೆಷಲ್ ಬ್ಯಾರಕ್ನಿಂದ ಹೊರಬಂದು, ಮೂವರ ಜೊತೆ ಕುಳಿತು ಹರಟೆ ಹೊಡೆಯುತ್ತಿದ್ದಾರೆ. ಕಾಫಿ ಮಗ್ ಹಿಡಿದುಕೊಂಡು ಅವರು ಕುಳಿತಿದ್ದಾರೆ. ಕೈಯಲ್ಲಿ ಸಿಗರೇಟ್ ಕೂಡ ಇದೆ. ಈ ಫೋಟೋ ವೈರಲ್ ಆಗಿದೆ.
ಈಗಾಗಲೇ ಅನೇಕರು ಜೈಲಿಗೆ ಭೇಟಿ ನೀಡಿ ದರ್ಶನ್ ಅವರನ್ನು ಭೇಟಿ ಮಾಡಿ ಬಂದಿದ್ದಾರೆ. ಪೊಲೀಸರ ತನಿಖೆಯಲ್ಲಿ ಹೇಳಿಕೆ ನೀಡಿದ ಬಳಿಕ ನಟ ಚಿಕ್ಕಣ್ಣ ಕೂಡ ಜೈಲಿಗೆ ತೆರಳಿ ದರ್ಶನ್ ಅವರನ್ನು ಮಾತನಾಡಿಸಿದ್ದರು. ಹಾಗಾಗಿ ಅವರಿಗೆ ಪೊಲೀಸರು ಮತ್ತೆ ನೋಟೀಸ್ ನೀಡುವ ಸಾಧ್ಯತೆ ಇದೆ. ಕೇಸ್ ತನಿಖೆ ಆರಂಭ ಆದಾಗ ದರ್ಶನ್ ಅವರು ಎ2 ಆಗಿದ್ದರು. ಆದರೆ ಚಾರ್ಚ್ಶೀಟ್ ಸಲ್ಲಿಸುವ ಹಂತದಲ್ಲಿ ಅವರನ್ನು ಎ1 ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಕೂಡ ಕೇಳಿಬಂದಿದೆ.