ಎಂ.ಎ ರುಬಿನಾಗೆ ಡಾ. ಎಪಿಜೆ ಅಬ್ದುಲ್ ಕಲಾಂ ರಾಷ್ಟ್ರ ಪ್ರಶಸ್ತಿ ಗೌರವ

Prasthutha: November 25, 2021

ಮಡಿಕೇರಿ: ನಿರಂತರ ಸಮಾಜ ಸೇವೆ ಹಾಗೂ ಸಾಹಿತ್ಯ ಕ್ಷೇತ್ರದ ಸಾಧನೆಯನ್ನು ಪರಿಗಣಿಸಿ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಎಂ.ಎ ರುಬೀನಾರವರಿಗೆ ಡಾ.ಎಪಿಜೆ ಅಬ್ದುಲ್ ಕಲಾಂ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ತುಮಕೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಭವನದಲ್ಲಿ ನಡೆದ ಮಾತೃಭೂಮಿ ಸೇವಾ ಟ್ರಸ್ಟ್’ನ 2ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಮಾಜ ಸೇವಕಿ ಸೋಮವಾರಪೇಟೆಯ ರುಬೀನಾ ಎಂ.ಎ. ರವರ ಸಮಾಜಸೇವೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಯನ್ನು ಮನಗಂಡು ಮಾತೃಭೂಮಿ ಸೇವಾ ಟ್ರಸ್ಟ್ ನೀಡುವ “ಡಾ.ಎಪಿಜೆ ಅಬ್ದುಲ್ ಕಲಾಂ ರಾಷ್ಟ್ರ ಪ್ರಶಸ್ತಿಯನ್ನು ರುಬಿನಾ ಅವರಿಗೆ ನೀಡಿ ಗೌರವಿಸಲಾಯಿತು.


ಈ ಸಂದರ್ಭ ಮಾತೃಭೂಮಿ ಟ್ರಸ್ಟಿನ ಅಧ್ಯಕ್ಷೆ ಡಾ.ಜ್ಯೋತಿ ಶ್ರೀನಿವಾಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರವಾಡ್, ಚಲನಚಿತ್ರ ನಟ ಕಿಶೋರ್ ಕುಮಾರ್, ರೈಲ್ವೇ ಇಲಾಖೆಯ ಆನಂದ್, ಡಾ.ಚಂದನ್ ಮತ್ತು ಟ್ರಸ್ಟಿನ ಪದಾಧಿಕಾರಿಗಳು ಹಾಗೂ ಸಾಧಕರು ಹಾಜರಿದ್ದರು.ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!