ಮಹಾರಾಷ್ಟ್ರದ ಎಂ.ವಿ.ಎ. ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ: ಯೆಚೂರಿ ಖಂಡನೆ

Prasthutha: June 24, 2022

ನವದೆಹಲಿ: ಮಹಾರಾಷ್ಟ್ರದ ʻಮಹಾ ವಿಕಾಸ್ ಅಘಾಡಿ (ಎಂವಿಎ)ʼ ಸರಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರಕಾರೀ ಏಜೆನ್ಸಿಗಳು ಮತ್ತು ಬಿಜೆಪಿ ರಾಜ್ಯ ಸರಕಾರೀ ಯಂತ್ರವನ್ನು ದುರುಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಖಂಡಿಸಿದ್ದಾರೆ.


ಈ ಕುರಿತು ಹೇಳಿಕೆ ನೀಡಿರುವ ಸಿಪಿಐ(ಎಂ) ಪಾಲಿಟ್ ಬ್ಯೂರೋ ಶಿವಸೇನಾ ಪಕ್ಷಕ್ಕೆ ಸೇರಿದ ಶಾಸಕರನ್ನು ಮೊದಲಿಗೆ ಸೂರತ್ ಗೆ, ನಂತರ ಗುವಾಹಟಿಗೆ ಹಾರಿಸಿಕೊಂಡು ಹೋಗಿರುವ ರೀತಿ ಅತ್ಯಂತ ಖಂಡನೀಯ ಎಂದು ಹೇಳಿದೆ. ಇವೆರಡೂ ಬಿಜೆಪಿ ಆಳ್ವಿಕೆಯ ರಾಜ್ಯಗಳು. ಇದನ್ನು ಬಿಜೆಪಿ ಎರಡೂ ರಾಜ್ಯಗಳಲ್ಲಿ ಪ್ರಭುತ್ವ ಆಡಳಿತ ಯಂತ್ರವನ್ನು ಉಪಯೋಗಿಸಿಕೊಂಡು ಮಾಡಲಾಗಿದೆ. ‘ಮಂತ್ರಿಗಳು ಮತ್ತು ಶಾಸಕರ ಮೇಲೆ ಗುರಿಯಿಡಲು ಕೇಂದ್ರೀಯ ಏಜೆನ್ಸಿಗಳನ್ನು ಕೂಡ ಬಳಸಿಕೊಳ್ಳಲಾಗಿದೆ. ಈ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಇದನ್ನು ಮಾಡಲಾಗುತ್ತಿದೆ ಎಂದು ಸೀತಾರಾಮ್ ಯೆಚೂರಿ ತಿಳಿಸಿದ್ದಾರೆ.


ಪ್ರಭುತ್ವ ಅಧಿಕಾರದ ಈ ನಾಚಿಕೆಗೆಟ್ಟ ಬಳಕೆಯು ವಿಪಕ್ಷಗಳ ಆಳ್ವಿಕೆಯ ರಾಜ್ಯ ಸರ್ಕಾರಗಳನ್ನು ಬೀಳಿಸುವುದಕ್ಕಾಗಿ ನಡೆಸಿದ ಈ ಹಿಂದಿನ ಪ್ರಯತ್ನಗಳಿಗೆ ಅನುಗುಣವಾಗಿದೆ ಎಂದಿರುವ ಸಿಪಿಐ(ಎಂ) ಪೊಲಿಟ್ ಬ್ಯುರೊ, ಈ ರೀತಿಯ ದುರುಪಯೋಗದ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವುದರ ವಿರುದ್ಧ ಪ್ರತಿಭಟಿಸುವಂತೆ ಎಲ್ಲಾ ಪ್ರಜಾಪ್ರಭುತ್ವವಾದಿ ವಿಭಾಗಗಳಿಗೆ ಸಿಪಿಐ(ಎಂ) ಕರೆ ನೀಡಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!