Home ಟಾಪ್ ಸುದ್ದಿಗಳು ರಾಹುಲ್ ನಂಥ ನಾಯಕನಿಂದ ಪಕ್ಷಕ್ಕೆ ಅವನತಿ: ಕಾಂಗ್ರೆಸ್ ಗೆ ಎಂಎ ಖಾನ್ ಗುಡ್ ಬೈ

ರಾಹುಲ್ ನಂಥ ನಾಯಕನಿಂದ ಪಕ್ಷಕ್ಕೆ ಅವನತಿ: ಕಾಂಗ್ರೆಸ್ ಗೆ ಎಂಎ ಖಾನ್ ಗುಡ್ ಬೈ

ಹೈದರಾಬಾದ್: ರಾಜ್ಯಸಭಾ ಮಾಜಿ ಸದಸ್ಯ ಎಂಎ ಖಾನ್ ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ.

ಎಂಎ ಖಾನ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ತನ್ನ ಹಿಂದಿನ ವೈಭವವನ್ನು ಮರಳಿ ಪಡೆಯುವಲ್ಲಿ, ದೇಶವನ್ನು ಮುನ್ನಡೆಸುವಲ್ಲಿ ಸಾರ್ವಜನಿಕರನ್ನು ಮನವೊಲಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ರಾಹುಲ್ ಗಾಂಧಿ ಅವರು ಪಕ್ಷದ ಉಪಾಧ್ಯಕ್ಷ ಸ್ಥಾನ ವಹಿಸಿಕೊಂಡ ಸಮಯದಿಂದ ಕಾಂಗ್ರೆಸ್ ಅವನತಿ ಆರಂಭವಾಗಿದೆ ಎಂದು ಹೇಳಿದ್ದಾರೆ.


ನಾನು ಕಾಲೇಜು ದಿನಗಳಿಂದಲೂ ಕಾಂಗ್ರೆಸ್ ಪಕ್ಷದೊಂದಿಗೆ ಬಾಂಧವ್ಯ ಹೊಂದಿದ್ದೇನೆ. ಆದರೆ ಈಗ ಎಲ್ಲಾ ಬದಲಾಗಿದೆ. ಪಕ್ಷದ ಸಮಿತಿಯ ಉಪಾಧ್ಯಕ್ಷ ಸ್ಥಾನವನ್ನು ರಾಹುಲ್ ಗಾಂಧಿ ನಿಭಾಯಿಸಿದ ನಂತರ ಪಕ್ಷದ ವರ್ಚಸ್ಸು ಇಳಿಮುಖಗೊಂಡಿದೆ. ಇಂಥ ನಾಯಕರಿಂದ ಪಕ್ಷ ಉದ್ಧಾರ ಆಗುವುದಿಲ್ಲ. ಅವರು ತಮ್ಮದೇ ಆದ ವಿಭಿನ್ನ ಆಲೋಚನಾ ಪ್ರಕ್ರಿಯೆಯನ್ನು ಹೊಂದಿದ್ದಾರೆ. ಇದು ಬ್ಲಾಕ್ ಮಟ್ಟದಿಂದ ಬೂತ್ ಹಂತದವರೆಗೆ ಯಾವುದೇ ಸದಸ್ಯರೊಂದಿಗೆ ಹೊಂದಿಕೆಯಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.


ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ರಾಜೀನಾಮೆ ಬೆನ್ನಲ್ಲೇ, ಇದೀಗ ಪಕ್ಷದಕ್ಕೆ ಮತ್ತೊಂದು ಶಾಕ್ ಎದುರಾಗಿದೆ.

Join Whatsapp
Exit mobile version