ಬೆಂಗಳೂರು: ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಉಸ್ತುವಾರಿ ಸಚಿವರು ಸರಿ ಆಗಿದ್ದಾರೆ. ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ನಾವು ಶಾಸಕರಲ್ವಾ ನಮಗೂ ಜವಬ್ದಾರಿ ಇಲ್ವಾ ಎಂದು ಪ್ರಶ್ನಿಸಿದರು. ನಾವು ಬಿಎಸ್ ಯಡಿಯೂರಪ್ಪ ಅವರ ಮಕ್ಕಳನ್ನು ಸೋಲಿಸಬೇಕು ಅಂತ ಇದ್ದೇವೆ. ಬಿವೈ ರಾಘವೇಂದ್ರ ಅವರನ್ನು ಸೋಲಿಸಬೇಕು ಅಂತ ಇದ್ದೇವೆ. ಆದರೆ ನಮ್ಮ ಸಚಿವರು ನಮ್ಮಲ್ಲೆ ಒಡಕು ಮೂಡಿಸುತ್ತಿದ್ದಾರೆ ಎಂದರು.