ಬೆಂಗಳೂರು: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಪ್ರಮೋದ್ ಮಧ್ವರಾಜ್ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದೆ.
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಜೆಡಿಎಸ್ ಪಕ್ಷದ ಮಾಜಿ ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ನಗರದ ರಾಜಭವನ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.