‘ಕೈ’ಕೊಟ್ಟ ಕೆಲವೇ ನಿಮಿಷಗಳಲ್ಲಿ ‘ಕಮಲ’ ಮುಡಿದ ಪ್ರಮೋದ್ ಮಧ್ವರಾಜ್

Prasthutha|

ಬೆಂಗಳೂರು: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್​​ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

- Advertisement -

ಪ್ರಮೋದ್ ಮಧ್ವರಾಜ್ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದೆ.

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಜೆಡಿಎಸ್ ಪಕ್ಷದ ಮಾಜಿ ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್‌ ಬಿಜೆಪಿ ಸೇರ್ಪಡೆಯಾಗಿದ್ದಾರೆ.

- Advertisement -

ನಗರದ ರಾಜಭವನ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

Join Whatsapp
Exit mobile version