Home ಟಾಪ್ ಸುದ್ದಿಗಳು ಮಧ್ಯಪ್ರದೇಶ | ಪಟಾಕಿ ಗೋದಾಮು ಸ್ಫೋಟ: 4 ಸಾವು, 7 ಮಂದಿಗೆ ಗಾಯ

ಮಧ್ಯಪ್ರದೇಶ | ಪಟಾಕಿ ಗೋದಾಮು ಸ್ಫೋಟ: 4 ಸಾವು, 7 ಮಂದಿಗೆ ಗಾಯ

ಭೋಪಾಲ್ : ಪಟಾಕಿ ಗೋದಾಮಿನಲ್ಲಿಸ್ಫೋಟ ನಡೆದು ನಾಲ್ವರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದಿದೆ.

ಮೊರೆನಾ ಜಿಲ್ಲೆಯ ಬಾನ್ಮೋರ್ ಪಟ್ಟಣದ ಜೈತ್ಪುರ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸ್ಫೋಟದಿಂದಾಗಿ ಇಡೀ ಕಟ್ಟಡ ಕುಸಿದಿದೆ ಎಂದು ತಿಳಿದು ಬಂದಿದೆ.

ಮಧ್ಯಪ್ರದೇಶದ ಮೊರೆನಾದಲ್ಲಿರುವ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಟ್ಟು ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಬಕ್ಕಿ ಕಾರ್ತಿಕೇಯನ್ ತಿಳಿಸಿದ್ದಾರೆ.

ಸ್ಫೋಟಕ್ಕೆ  ಕಾರಣ ಇನ್ನೂ ತಿಳಿದು ಬಂದಿಲ್ಲ.  ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Join Whatsapp
Exit mobile version