Home ಟಾಪ್ ಸುದ್ದಿಗಳು ಮಧ್ಯಪ್ರದೇಶ: ದೇವಾಲಯದ ಗೋಡೆ ಕುಸಿದು 9 ಮಕ್ಕಳು ಸಾವು

ಮಧ್ಯಪ್ರದೇಶ: ದೇವಾಲಯದ ಗೋಡೆ ಕುಸಿದು 9 ಮಕ್ಕಳು ಸಾವು

ಬೋಪಾಲ್: ದೇವಾಲಯವೊಂದರಲ್ಲಿ ಇಂದು ಬೆಳಿಗ್ಗೆ ಗೋಡೆ ಕುಸಿದು 9 ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ.

ಶಹಪುರದ ಹರ್ದೌಲ್ ಬಾಬಾ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಈ ದುರಂತ ಘಟನೆ ನಡೆದಿದೆ.

ಘಟನೆಯ ಸ್ಥಳದಿಂದ ಎಲ್ಲಾ ಅವಶೇಷಗಳನ್ನು ತೆಗೆದುಹಾಕಲಾಗಿದೆ ಎಂದು ಸಾಗರ್ ಜಿಲ್ಲಾಧಿಕಾರಿ ದೀಪಕ್ ಆರ್ಯ ತಿಳಿಸಿದ್ದಾರೆ.

Join Whatsapp
Exit mobile version