ಮಧ್ಯಪ್ರದೇಶ, ಛತ್ತೀಸ್ಗಢ, ತೆಲಂಗಾಣ: ಕಾಂಗ್ರೆಸ್ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

Prasthutha|

-ಛತ್ತೀಸ್ಗಢದ 30 ಅಭ್ಯರ್ಥಿಗಳಲ್ಲಿ 14 ಎಸ್ಟಿ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಗೆ ಟಿಕೆಟ್

- Advertisement -

ನವದೆಹಲಿ: ಈ ವರ್ಷದ ಕೊನೆಯಲ್ಲಿ  ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್ ಗಡ ವಿಧಾನಸಭಾ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷವು ಇಂದು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಧ್ಯಪ್ರದೇಶದ 144, ಛತ್ತೀಸ್ ಗಢದ 30 ಮತ್ತು ತೆಲಂಗಾಣದ 55 ವಿಧಾನಸಭಾ ಸ್ಥಾನಗಳಿಗೆ ಪಕ್ಷ ಅಭ್ಯರ್ಥಿಗಳನ್ನು ಘೋಷಿಸಿದೆ.

ಮಧ್ಯಪ್ರದೇಶದಲ್ಲಿ ಚಿಂದ್ವಾರಾ ಕ್ಷೇತ್ರದಿಂದ ಮಾಜಿ ಸಿಎಂ ಕಮಲ್ ನಾಥ್ ಅವರನ್ನು ಕಣಕ್ಕಿಳಿಸಲಾಗಿದೆ.
ಛತ್ತೀಸ್ ಗಢದಲ್ಲಿ ಉಪಮುಖ್ಯಮಂತ್ರಿ ಟಿ.ಎಸ್.ಸಿಂಗ್ ದೇವ್ ಅವರನ್ನು ಅವರ ಭದ್ರಕೋಟೆಯಾದ ಅಂಬಿಕಾಪುರದಿಂದ ಉಳಿಸಿಕೊಳ್ಳಲಾದರೆ, ಮುಖ್ಯಮಂತ್ರಿ ಭೂಪೇಶ್ ಬಘೇಲ್ ಪಟಾನ್ ನಿಂದ ಸ್ಪರ್ಧಿಸಲಿದ್ದಾರೆ.

- Advertisement -

ಛತ್ತೀಸ್ ಗಢದಲ್ಲಿ ಘೋಷಿಸಲಾದ 30 ಅಭ್ಯರ್ಥಿಗಳಲ್ಲಿ 14 ಅಭ್ಯರ್ಥಿಗಳು ಎಸ್ಟಿ ಸಮುದಾಯಕ್ಕೆ ಸೇರಿದವರು. ಅಲ್ಲದೆ, ಮೊದಲ ಪಟ್ಟಿಯ ಪ್ರಕಾರ ಮೂವರು ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ. ಪಕ್ಷದ ಆಂತರಿಕ ಸಮೀಕ್ಷೆಯ ಪ್ರಕಾರ ತಮ್ಮ ಸ್ಥಾನಗಳಲ್ಲಿ ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿರುವ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.