Home Uncategorized ಧಾರ್ಮಿಕ ಸ್ಥಳಗಳಲ್ಲಿ ಮಾಂಸ ಮಾರಾಟ, ಧ್ವನಿವರ್ಧಕ ಬ್ಯಾನ್: ಅಧಿಕಾರ ಆರಂಭದಲ್ಲೇ ಮಧ್ಯಪ್ರದೇಶ ಸಿಎಂ ಆದೇಶ

ಧಾರ್ಮಿಕ ಸ್ಥಳಗಳಲ್ಲಿ ಮಾಂಸ ಮಾರಾಟ, ಧ್ವನಿವರ್ಧಕ ಬ್ಯಾನ್: ಅಧಿಕಾರ ಆರಂಭದಲ್ಲೇ ಮಧ್ಯಪ್ರದೇಶ ಸಿಎಂ ಆದೇಶ

ಭೋಪಾಲ್ : ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೇರಿದ್ದು, ನೂತನ ಮುಖ್ಯಮಂತ್ರಿ ಮೋಹನ್ ಯಾದವ್ ಅಧಿಕಾರ ವಹಿಸಿಕೊಳ್ಳುತ್ತಲೇ ಧಾರ್ಮಿಕ ಸ್ಥಳಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಮಾಂಸ ಮಾರಾಟ ಮತ್ತು ಧ್ವನಿವರ್ಧಕಗಳ ಅನಿಯಂತ್ರಿತ ಬಳಕೆಯನ್ನ ನಿಷೇಧಿಸಿ ಆದೇಶಿಸಿದ್ದಾರೆ.

ರಾಜ್ಯ ರಾಜಧಾನಿ ಭೋಪಾಲ್‌ನ ಲಾಲ್ ಪೆರೇಡ್ ಮೈದಾನದಲ್ಲಿ ಇಂದು ರಾಜ್ಯಪಾಲ ಮಂಗುಭಾಯ್ ಪಟೇಲ್ 58 ವರ್ಷದ ನಾಯಕನಿಗೆ ಪ್ರಮಾಣ ವಚನ ಬೋಧಿಸಿದ್ದರು

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಯಾದವ್ ಅವರ ಹಿಂದಿನ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Join Whatsapp
Exit mobile version