ಮಧ್ಯ ಪ್ರದೇಶ: ರಾಜ್ಯ ಸಚಿವಾಲಯದಲ್ಲಿ ಅಗ್ನಿ ಅವಘಡ

Prasthutha|

ಭೋಪಾಲ್: ಮಧ್ಯ ಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿರುವ ರಾಜ್ಯ ಸಚಿವಾಲಯದಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ.

- Advertisement -


ಸಚಿವಾಲಯ ಕಟ್ಟಡ ವಲ್ಲಭ ಭವನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಂದಿಸಲು ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ವೇಗವಾಗಿ ಹರಡಿದ್ದಲ್ಲದೆ, ದಟ್ಟವಾದ ಹೊಗೆ ಆವರಿಸಿದೆ. ಸಾವು-ನೋವು ಸಂಭವಿಸಿದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ.

ಭೋಪಾಲ್‌ನ ವಲ್ಲಭ ಭವನದ ರಾಜ್ಯ ಸಚಿವಾಲಯದಲ್ಲಿ ಬೆಂಕಿ ಅವಘಡ ಸಂಭವಿಸಿದ ಕುರಿತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಪ್ರತಿಕ್ರಿಯಸಿದ್ದು, ಭವನದ ಹಳೆಯ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬುದು ಸದ್ಯದ ಮಾಹಿತಿಯಿಂದ ದೃಢಪಟ್ಟಿದೆ. ಜಿಲ್ಲಾಧಿಕಾರಿಯಿಂದ ಮಾಹಿತಿ ಸ್ವೀಕರಿಸಲಾಗಿದ್ದು, ಅದನ್ನು ಮೇಲ್ವಿಚಾರಣೆ ಮಾಡಲು ಸಿಎಸ್‌ ಗೆ ಸೂಚಿಸಿದ್ದೇನೆ ಎಂದಿದ್ದಾರೆ.

- Advertisement -



Join Whatsapp