ಇಂಧೋರ್: ಎರಡು ಮಹಡಿಯ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಏಳು ಮಂದಿ ಸಜೀವ ದಹನಗೊಂಡಿರುವ ಘಟನೆ ಮಧ್ಯ ಪ್ರದೇಶ ರಾಜಧಾನಿ ಇಂಧೋರ್ ನ ಸ್ವರ್ಣ ಭಾಗ್ ಕಾಲೊನಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ಮನೆಯೊಂದರ ಒಳಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು ಹತ್ತಿ ಉರಿದಿರಬಹುದು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ ಎಂದು ಇಂದೋರ್ ಪೊಲೀಸ್ ಆಯುಕ್ತ ಹರಿನಾರಾಯಣ ಚಾರಿ ಮಿಶ್ರ ತಿಳಿಸಿದ್ದಾರೆ.
9 ಮಂದಿಯನ್ನು ಇದುವರೆಗೆ ರಕ್ಷಿಸಿದ್ದು, ಬೆಂಕಿಯನ್ನು ನಂದಿಸಿ ಸಹಜ ಸ್ಥಿತಿಗೆ ತರಲು ಮೂರು ಗಂಟೆ ಹಿಡಿಯಿತು ಎಂದು ಅಗ್ನಿಶಾಮಕ ಸಿಬ್ಬಂದಿ ಹೇಳಿದ್ದಾರೆ.
ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಿ ನಿರ್ಲಕ್ಷ್ಯ ತೋರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.