ಭೋಪಾಲ್: ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಜೆಪಿ ಕಾರ್ಯಕರ್ತನ ಮನೆಯನ್ನು ರಾಜ್ಯ ಸರ್ಕಾರದ ಆದೇಶದ ಮೇರೆಗೆ ಕೆಡವಲಾಗಿದೆ.
ಮಂಗಳವಾರ ಆರೋಪಿ ಪ್ರವೇಶ್ ಶುಕ್ಲಾ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಪ್ರವೇಶ್ ಶುಕ್ಲಾ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಸ್ತುತ ರೇವಾ ಸೆಂಟ್ರಲ್ ಜೈಲಿನಲ್ಲಿ ಇರಿಸಲಾಗಿದೆ.
ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.
ಮಧ್ಯ ಪ್ರದೇಶದ ಸಿಧಿ ಜಿಲ್ಲೆಯ ಕುಬ್ರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರೋಪಿಯು ಕುಡಿದ ನಶೆಯಲ್ಲಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಬಳಿಕ ಪ್ರವೇಶ್ ಶುಕ್ಲಾ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು.