ಆದಿವಾಸಿ ವ್ಯಕ್ತಿ ಮೇಲೆ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದ ಬಿಜೆಪಿ ಕಾರ್ಯಕರ್ತನ ಮನೆ ಧ್ವಂಸ

Prasthutha|

ಭೋಪಾಲ್: ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಜೆಪಿ ಕಾರ್ಯಕರ್ತನ ಮನೆಯನ್ನು ರಾಜ್ಯ ಸರ್ಕಾರದ ಆದೇಶದ ಮೇರೆಗೆ ಕೆಡವಲಾಗಿದೆ.

- Advertisement -

ಮಂಗಳವಾರ ಆರೋಪಿ ಪ್ರವೇಶ್ ಶುಕ್ಲಾ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಪ್ರವೇಶ್ ಶುಕ್ಲಾ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಸ್ತುತ ರೇವಾ ಸೆಂಟ್ರಲ್ ಜೈಲಿನಲ್ಲಿ ಇರಿಸಲಾಗಿದೆ.

- Advertisement -

ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.

ಮಧ್ಯ ಪ್ರದೇಶದ ಸಿಧಿ ಜಿಲ್ಲೆಯ ಕುಬ್ರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರೋಪಿಯು ಕುಡಿದ ನಶೆಯಲ್ಲಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಬಳಿಕ ಪ್ರವೇಶ್ ಶುಕ್ಲಾ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು.

Join Whatsapp