ಮಧ್ಯಪ್ರದೇಶ: ಕಾಂಗ್ರೆಸ್ ಶಾಸಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

Prasthutha|

ಭೋಪಾಲ್: ಮಹಿಳೆ ಮೇಲೆ ಮಾನಸಿಕ ಕಿರುಕುಳ ಮತ್ತು ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ಉಮಂಗ್ ಸಿಂಘಾರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

- Advertisement -

ಸಿಂಘಾರ್ ರ ಪತ್ನಿ ಎಂದು ಹೇಳಿಕೊಂಡಿರುವ ಮಹಿಳೆ, ತನ್ನ ಇಚ್ಛೆಗೆ ವಿರುದ್ಧವಾಗಿ ಪದೇ ಪದೇ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದು, ಆಕೆಯ ದೂರಿನ ಮೇರೆಗೆ ಧಾರ್ ನಗರದ ನೌಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಧಾರ್ ಎಸ್‌ಪಿ ಆದಿತ್ಯ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ಗಂಧವಾನಿ ಕ್ಷೇತ್ರವನ್ನು ಪ್ರತಿನಿಧಿಸುವ ಮತ್ತು ಕಾಂಗ್ರೆಸ್‌ನ ರಾಷ್ಟ್ರೀಯ ಕಾರ್ಯದರ್ಶಿಯೂ ಆಗಿರುವ ಉಮಂಗ್ ಸಿಂಘಾರ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಮಧ್ಯ ಪ್ರದೇಶದ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಿಭಾಗದ ಅಧ್ಯಕ್ಷ ಕೆ.ಕೆ , ಈ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ. ಆದರೆ, ಮೇಲ್ನೋಟಕ್ಕೆ ಇದು ‘ರಾಜಕೀಯ ಪ್ರೇರಿತ’ ಪ್ರಕರಣವಾಗಿದೆ ಎಂದು ತೋರುತ್ತದೆ ಎಂದು ಹೇಳಿದ್ದಾರೆ.

ಶಾಸಕನಿಗೆ ಇತರ ಪತ್ನಿಯರೂ ಇದ್ದಾರೆ ಎಂದು ಬಿಜೆಪಿ ನಾಯಕ ಮಿಶ್ರಾ ಆರೋಪಿಸಿದ್ದಾರೆ.

Join Whatsapp