ಭೋಪಾಲ್: ಮಧ್ಯಪ್ರದೇಶದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ 33,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ತಿಳಿಸಿದೆ.
ರಾಜ್ಯ ವಿಧಾನಸಭೆಯಲ್ಲಿ ಶುಕ್ರವಾರ ಕಾಂಗ್ರೆಸ್ ಶಾಸಕ ಜಿತು ಪಟ್ವಾರಿ ಅವರು ಕೇಳಿದ ಪ್ರಶ್ನೆಗೆ ಗೃಹ ಸಚಿವ ನರೋತ್ತಮ್ ಮಿಶ್ರಾ ಲಿಖಿತ ಉತ್ತರ ನೀಡಿದ್ದಾರೆ. ಈ ಮಾಹಿತಿಯ ಪ್ರಕಾರ ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ sc/st ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.
ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ 33,239 ಪ್ರಕರಣಗಳು ಜನವರಿ 2018 ಮತ್ತು ನವೆಂಬರ್ 2021 ನಡುವೆ ಸುಮಾರು ನಾಲ್ಕು ವರ್ಷಗಳ ಅವಧಿಯಲ್ಲಿ ದಾಖಲಾಗಿವೆ. 2020 ರಲ್ಲಿ 9,664 ಪ್ರಕರಣಗಳು ದಾಖಲಾಗಿದ್ದರೆ, ಈ ವರ್ಷದ ಕಳೆದ 11 ತಿಂಗಳಲ್ಲಿ 9,249 ಪ್ರಕರಣಗಳು ದಾಖಲಾಗಿವೆ.
2018 ರಲ್ಲಿ ಈ ಕಾಯ್ದೆಯಡಿ ಒಟ್ಟು 6,852 ಪ್ರಕರಣಗಳು ದಾಖಲಾಗಿದ್ದರೆ, 2019 ರಲ್ಲಿ ಈ ಸಂಖ್ಯೆ 7,474 ಆಗಿದೆ.