ಮಧ್ಯಪ್ರದೇಶ: 4 ವರ್ಷಗಳಲ್ಲಿ sc/st ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಗಳೆಷ್ಟು ಗೊತ್ತೇ?

Prasthutha|

ಭೋಪಾಲ್: ಮಧ್ಯಪ್ರದೇಶದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ 33,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ತಿಳಿಸಿದೆ.

- Advertisement -

ರಾಜ್ಯ ವಿಧಾನಸಭೆಯಲ್ಲಿ ಶುಕ್ರವಾರ ಕಾಂಗ್ರೆಸ್ ಶಾಸಕ ಜಿತು ಪಟ್ವಾರಿ ಅವರು ಕೇಳಿದ ಪ್ರಶ್ನೆಗೆ ಗೃಹ ಸಚಿವ ನರೋತ್ತಮ್ ಮಿಶ್ರಾ ಲಿಖಿತ ಉತ್ತರ ನೀಡಿದ್ದಾರೆ. ಈ ಮಾಹಿತಿಯ ಪ್ರಕಾರ ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ sc/st ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.

ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ 33,239 ಪ್ರಕರಣಗಳು ಜನವರಿ 2018 ಮತ್ತು ನವೆಂಬರ್ 2021 ನಡುವೆ ಸುಮಾರು ನಾಲ್ಕು ವರ್ಷಗಳ ಅವಧಿಯಲ್ಲಿ ದಾಖಲಾಗಿವೆ. 2020 ರಲ್ಲಿ 9,664 ಪ್ರಕರಣಗಳು ದಾಖಲಾಗಿದ್ದರೆ, ಈ ವರ್ಷದ ಕಳೆದ 11 ತಿಂಗಳಲ್ಲಿ 9,249 ಪ್ರಕರಣಗಳು ದಾಖಲಾಗಿವೆ.

- Advertisement -

2018 ರಲ್ಲಿ ಈ ಕಾಯ್ದೆಯಡಿ ಒಟ್ಟು 6,852 ಪ್ರಕರಣಗಳು ದಾಖಲಾಗಿದ್ದರೆ, 2019 ರಲ್ಲಿ ಈ ಸಂಖ್ಯೆ 7,474 ಆಗಿದೆ.

Join Whatsapp