ಮಡಿಕೇರಿ: ವಿಧಾನ ಪರಿಷತ್ ಚುನಾವಣೆಗೆ ಸುಸೂತ್ರವಾಗಿ ನಡೆದ ಮಸ್ಟರಿಂಗ್ ಕಾರ್ಯ

Prasthutha|

ಮಡಿಕೇರಿ: ನಾಳೆ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಮಸ್ಟರಿಂಗ್ ಕಾರ್ಯವು ನಗರದ ಸಂತ ಜೋಸೆಫರ ಶಾಲೆಯಲ್ಲಿ ನಡೆಯಿತು. ಮತಗಟ್ಟೆ ಅಧಿಕಾರಿಗಳು, ಸಿಬ್ಬಂದಿಗಳು ತಮ್ಮ ಮತಗಟ್ಟೆಗೆ ಸಂಬಂಧಿಸಿದ ಸಾಮಗ್ರಿಗಳನ್ನು ಪರಿಶೀಲಿಸಿ, ಅಗತ್ಯ ತಯಾರಿ ಮಾಡಿಕೊಳ್ಳುತ್ತಿದ್ದು ಕಂಡುಬಂದಿತು. ಸೆಕ್ಟರ್ ಅಧಿಕಾರಿಗಳು ತಮ್ಮ ಮತಗಟ್ಟೆ ವ್ಯಾಪ್ತಿಯ ಮತಗಟ್ಡೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಚರ್ಚಿಸಿ, ಚುನಾವಣಾ ಅಗತ್ಯ ಸಾಮಗ್ರಿಗಳ ಬಗ್ಗೆ ಸಿದ್ಧತೆಯನ್ನು ಮಾಡಿಕೊಳ್ಳಲಾಯಿತ್ತು.

- Advertisement -


ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಸ್ಟರಿಂಗ್ ಕೇಂದ್ರಕ್ಕೆ ತೆರಳಿ ಮತಗಟ್ಟೆ ಅಧಿಕಾರಿಗಳು, ಸಿಬ್ಬಂದಿಗಳು, ಸೆಕ್ಟರ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು. ವಿಧಾನ ಪರಿಷತ್ ಚುನಾವಣೆ ಸಂಬಂಧ ಅಗತ್ಯ ಸಾಮಗ್ರಿಗಳನ್ನು ಪಡೆದಿರುವ ಬಗ್ಗೆ ಮಾಹಿತಿ ಪಡೆದರು.


ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ, ವಿಧಾನ ಪರಿಷತ್ ಚುನಾವಣೆಯ ಮಸ್ಟರಿಂಗ್ ಕಾರ್ಯವು ಸುಸೂತ್ರವಾಗಿ ನಡೆದಿದೆ. ಚುನಾವಣೆ ಸಂಬಂಧ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿವೆ. ‘ಸಂಸದರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ನಗರಸಭಾ ಸದಸ್ಯರು ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಮತದಾನ ಮಾಡಲಿದ್ದಾರೆ.

- Advertisement -

ಜಿಲ್ಲೆಯಲ್ಲಿ ಒಟ್ಟು 1, 329 ಮಂದಿ ಮತ ಚಲಾಯಿಸಲಿದ್ದಾರೆ. ಮತದಾನವು ಡಿಸೆಂಬರ್, 10 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ ಎಂದು ಅವರು ಹೇಳಿದರು.
ಕೊಡಗು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ಗೆ ನಡೆಯುವ ಚುನಾವಣೆ ಸಂಬಂಧ ಒಟ್ಟು 108 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

Join Whatsapp