Home ಟಾಪ್ ಸುದ್ದಿಗಳು ಮಡಿಕೇರಿ: ಹಾರಂಗಿ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಮಡಿಕೇರಿ: ಹಾರಂಗಿ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಕೊಡಗು: ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕುಶಾಲನಗರದ ಹಾರಂಗಿ ಜಲಾಶಯದ ಒಳ ಹರಿವಿನಲ್ಲಿ ಭಾರಿ ಹೆಚ್ಚಳವಾಗಿದೆ.

ಜಲಾಶಯದಿಂದ 20 ಸಾವಿರ ಕ್ಯುಸೆಕ್ ನೀರು ಕಾವೇರಿ ನದಿಗೆ ಬಿಡುಗಡೆ ಮಾಡಲಾಗಿದ್ದುಜಲಾಶಯದ ಮುಂಭಾಗದ ಸೇತುವೆ ಮೇಲೆ ನೀರು ಹರಿಯುತ್ತಿದೆ.

ನದಿ ಪಾತ್ರದ ನಿವಾಸಿಗಳಲ್ಲಿ ಪ್ರವಾಹದ ಆತಂಕ ಎದುರಾಗಿದ್ದು,ಗುಡ್ಡೆಹೊಸೂರು – ಹಾರಂಗಿ – ಸೋಮವಾರಪೇಟೆ ರಸ್ತೆಯಲ್ಲಿ ಸಂಚಾರ ಬಂದ್ ಆಗಿದೆ.

Join Whatsapp
Exit mobile version