ಮಡಿಕೇರಿ:ಮಗುಚಿ ಬಿದ್ದ ಸಿಲಿಂಡರ್ ಲಾರಿ; ತಪ್ಪಿದ ಭಾರಿ ಅನಾಹುತ

Prasthutha|

ಕೊಡಗು: ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಮಗುಚಿ ಬಿದ್ದ ಘಟನೆ ಮಡಿಕೇರಿ  ನಗರದ ಹೊರವಲಯ ಸೆವೆಂತ್ ಮೈಲ್  ಬಳಿ ಸಂಭವಿಸಿದೆ. ಲಾರಿಯಲ್ಲಿದ್ದ ಸಿಲಿಂಡರ್ ಗಳೆಲ್ಲವೂ  ಖಾಲಿಯಾಗಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.

- Advertisement -

ಚಾಲಕ ಸಣ್ಣಪುಟ್ಟ ಗಾಯ ಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಲಾರಿಯಲ್ಲಿ ಖಾಲಿ ಸಿಲಿಂಡರ್ ಸಾಗಿಸುತ್ತಿದ್ದುದರಿಂದ ಅದೃಷ್ಟವಶಾತ್ ಯಾವುದೇ ದುರಂತ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಮಡಿಕೇರಿ ಸಂಚಾರಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಪರಿಕರಗಳೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಗಳನ್ನು ಕೈಗೊಂಡಿದ್ದಾರೆ.

Join Whatsapp