Home ಟಾಪ್ ಸುದ್ದಿಗಳು ಮಡಿಕೇರಿ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಪ್ರಕರಣ: ಟ್ವಿಟ್ಟರ್ ನಲ್ಲಿ ಟ್ರೆಂಡ್ ಆದ #SaveKarnatakaFromFascists

ಮಡಿಕೇರಿ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಪ್ರಕರಣ: ಟ್ವಿಟ್ಟರ್ ನಲ್ಲಿ ಟ್ರೆಂಡ್ ಆದ #SaveKarnatakaFromFascists

ಕೊಡಗು: ಮಡಿಕೇರಿಯ ಶನಿವಾರಸಂತೆಯಲ್ಲಿ ಗುರುವಾರ ಸಂಘಪರಿವಾರದ ಕಾರ್ಯಕರ್ತರು ಮುಸ್ಲಿಮ್ ವಿದ್ಯಾರ್ಥಿನಿಯರ ಮೇಲೇ ನಡೆಸಿದ ದೌರ್ಜನ್ಯವನ್ನು ಖಂಡಿಸಿ ಶುಕ್ರವಾರ ಸಮಾಸ ಮನಸ್ಕರು ನಡೆಸುತ್ತಿರುವ ಆನ್ ಲೈನ್ ಟ್ವಿಟ್ಟರ್ ಅಭಿಯಾನ ಟಾಪ್ ಟ್ರೆಂಡಿಂಗ್ ಆಗಿದ್ದು, ದೇಶದಲ್ಲೇ ಸಂಚಲನ ಮೂಡಿಸಿದೆ.

https://twitter.com/harisullal75/status/1461623325059207170

ಶನಿವಾರಸಂತೆಯ ಖಾಸಗಿ ಶಾಲೆಯ ವಿದ್ಯಾರ್ಥಿನಿಯರ ಮೇಲೆ ಕ್ಷುಲ್ಲಕ ವಿಚಾರವನ್ನು ಮುಂದಿಟ್ಟುಕೊಂಡು ಸಂಘಪರಿವಾರದ ಕಾರ್ಯಕರ್ತರು ಗಂಭೀರವಾಗಿ ಹಲ್ಲೆ ನಡೆಸಿದ್ದರು. ಈ ಕ್ರಮವನ್ನು ಖಂಡಿಸಿ ಶುಕ್ರವಾರ ಟ್ವಿಟ್ಟರ್ ಅಭಿಯಾನವನ್ನು ಆಯೋಜಿಸಲಾಗಿದ್ದು, ಟಾಪ್ ಟ್ರೆಂಡಿಂಗ್ ಆಗಿದೆ.

ಸದ್ಯ ಸಂತ್ರಸ್ತ ವಿದ್ಯಾರ್ಥಿನಿಯರು ಕೊಡ್ಲಿಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾತ್ರವಲ್ಲ ಆರೋಪಿಗಳ ವಿರುದ್ಧ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.

Join Whatsapp
Exit mobile version