ಮಡಿಕೇರಿ: ರಾಜಾಸೀಟ್ ರಸ್ತೆಯಲ್ಲಿರುವ ಖಾಸಗಿ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಾಂಡ್, ಅಸ್ಸಾಂ ಮೂಲಕ 29 ಕಟ್ಟಡ ಕಾರ್ಮಿಕರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಕಳೆದ ಎರಡು ದಿನಗಳಿಂದ ಆರೋಗ್ಯ ಸಮಸ್ಯೆ ಕಂಡು ಬಂದ ಹಿನ್ನೆಲೆ ಒಟ್ಟು 150 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು, 29 ಮಂದಿಯಲ್ಲಿ ಕೋವಿಡ್ ದೃಢಪಟ್ಟಿದೆ.
ಸೋಂಕಿತರನ್ನು ಪ್ರತ್ಯೇಕ ಕೊಠಡಿಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಸ್ಥಳಕ್ಕೆ ಡಿಎಚ್ ಓ ಡಾ.ವೆಂಕಟೇಶ್ ಭೇಟಿ ನೀಡಿ ಕಟ್ಟಡವನ್ನು ಸೀಲ್ ಡೌನ್ ಮಾಡಲಾಗಿದೆ.